Banner Ad

ಸುದ್ದಿ ಕನ್ನಡ ವಾರ್ತೆ
ಶಿರಸಿ- ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕೊಳಗಿಬೀಸ್ ಬಳಿ ಸಾರಿಗೆ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,40ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.ಭಟ್ಕಳದಿಂದ ಬಾಗಲಕೋಟೆ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್‌ ಹಾಗೂ ಶಿರಸಿಯಿಂದ ಕುಮಟಾಕ್ಕೆ ಹೊರಟಿದ್ದ ಖಾಸಗಿ ಬಸ್‌ ನಡುವೆ ಅಪಘಾತ ಸಂಭವಿಸಿದೆ.

ಮುಖಾಮುಖಿ ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.ಅಪಘಾತದಲ್ಲಿ ಎರಡೂ ಬಸ್ ನ ನಲವತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದೆ. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿರಸಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Banner Ad

ಅಪಘಾತದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಎರಡೂ ಕಡೆಗಳಲ್ಲಿ ವಾಹನಗಳ ದಟ್ಟಣೆ ಉಂಟಾಗಿ ಸಂಚಾರದಲ್ಲಿ ಅಡಚಣೆ ಉಂಟಾಯಿತು.ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿದರು.

Banner Ad