Banner Ad

ಸುದ್ದಿ ಕನ್ನಡ ವಾರ್ತೆ
ಶಿರಸಿ: ತಾಲೂಕಿನ ಕುಮಟಾ ರಸ್ತೆಯ ಹನುಮಂತಿ ತಿರುವಿನಲ್ಲಿ ಶುಕ್ರವಾರ ಪಿಕಪ್ ವಾಹನಗಳ ನಡುವೆ ಸಂಭವಿಸಿದ ಡಿಕ್ಕಿಯಿಂದ ಒಂದು ಪಿಕಪ್ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.

ಸಾಗರದಿಂದ ಗೋಳಿ ಸೊಸೈಟಿಗೆ ಬೆಲ್ಲ ಸಾಗಿಸುತ್ತಿದ್ದ ಪಿಕಪ್ ಹಾಗೂ ಎದುರಿನಿಂದ ಬರುತ್ತಿದ್ದ ಇನ್ನೊಂದು ಪಿಕಪ್ ನಡುವೆ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಒಂದು ಪಿಕಪ್ ವಾಹನ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ವಾಹನದಲ್ಲಿದ್ದ ಬೆಲ್ಲದ ಕ್ಯಾನ್‌ಗಳು ರಸ್ತೆಯಲ್ಲೇ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

Banner Ad

ಅಪಘಾತದಲ್ಲಿ ಪಿಕಪ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಚಾಲಕ ಜೀವಾಪಾಯದಿಂದ ಪಾರಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Banner Ad