Banner Ad

ಸುದ್ದಿ ಕನ್ನಡ ವಾರ್ತೆ
ಶಿರಸಿ: ತಾಲೂಕಿನ ಐತಿಹಾಸಿಕ ಪ್ರಸಿದ್ಧ ಮಂಜುಗುಣಿ ದೇವಸ್ಥಾನದ ರಥ ಬೀದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರು ಮಾದರಿಯಾಗಿದ್ದಾರೆ.

ಕರ್ನಾಟಕದ ತಿರುಪತಿ ಎಂದೇ ಹೆಸರು ಪಡೆದಿರುವ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಮಂಜುಗುಣಿಯಲ್ಲಿ ಎ. 2 ರಂದು ರಥೋತ್ಸವ ಸಂಪನ್ನಗೊಂಡಿದೆ. ರಥೋತ್ಸವದ ಸಂದರ್ಭದಲ್ಲಿ ರಥ ಬೀದಿಯ ಇಕ್ಕೆಲಗಳಲ್ಲಿ ಬಿದ್ದಿರುವ ತ್ಯಾಜ್ಯವನ್ನು ಭಾನುವಾರ ಬೆಳಿಗ್ಗೆ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಹವ್ಯಕ ಬ್ರಾಹ್ಮಣ ಸಮುದಾಯದ ನೇತೃತ್ವದಲ್ಲಿ ಹಾಗೂ ಎಲ್ಲ ಸಮುದಾಯದವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. 84 ವಯಸ್ಸಿನ ಸೇರಿದಂತೆ ಸತ್ಯನಾರಾಯಣ ಹೆಗಡೆ ಚಿಕ್ಕಚಿಕ್ಕ ಮಕ್ಕಳು ಕೈಯಲ್ಲಿ ಕಸಬರಗೆ ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

Banner Ad
Banner Ad