Banner Ad

ಸುದ್ದಿ ಕನ್ನಡ ವಾರ್ತೆ
ಕುಮಟಾ: ಪಟ್ಟಣದ ಗಿಬ್ ಸರ್ಕಲ್ ಬಳಿ ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಹೆಗಡೆ ಗ್ರಾಮದ ನಿವಾಸಿ ಸುಬ್ರಮಣ್ಯ ಭೀರಪ್ಪ ಅಂಬಿಗ (35) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಸಹಸವಾರ ಭಗೀರಥ ಮಹಾದೇವ ಅಂಬಿಗ (25) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇವರಿಬ್ಬರೂ ಸೇರಿ ಬೈಕ್‌ನಲ್ಲಿ ಮೀನುಗಾರಿಕಾ ಬಲೆ ಖರೀದಿಗಾಗಿ ಮಲ್ಪೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಲ್ಪೆಗೆ ತೆರಳುತ್ತಿದ್ದ ಇವರ ಬೈಕ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ಸುಬ್ರಮಣ್ಯ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Banner Ad

ಗಂಭೀರವಾಗಿ ಗಾಯಗೊಂಡ ಭಗೀರಥ ಅಂಬಿಗ ಅವರನ್ನು ತಕ್ಷಣವೇ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನಾ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Banner Ad