ಸುದ್ದಿ ಕನ್ನಡ ವಾರ್ತೆ
ಶಿರಸಿ: ಶಿರಸಿ-ಕುಮಟಾ ಹೆದ್ದಾರಿಯ ಕೊಳಗಿಬೀಸ್ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.

ಸ್ವಿಫ್ಟ್ ಕಾರು ಮತ್ತು ಇಕೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಅಪಘಾತ ನಡೆದ ಸ್ಥಳವು ತಿರುವು ಪ್ರದೇಶವಾಗಿದ್ದು, ಇಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಇದೇ ಸ್ಥಳದಲ್ಲಿ ಸಾರಿಗೆ ಬಸ್‌ ಹಾಗೂ ಖಾಸಗಿ ಬಸ್ ನಡುವೆ ಕೂಡ ಭೀಕರ ಅಪಘಾತ ಸಂಭವಿಸಿದ್ದನ್ನು ಸ್ಮರಿಸಬಹುದು.
ಸ್ಥಳೀಯರು ರಸ್ತೆ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.