Banner Ad

ಸುದ್ದಿ ಕನ್ನಡ ವಾರ್ತೆ

ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಖ್ಯಾತ ಸಾಹಿತಿ ದೇವನೂರು ಮಹಾದೇವ ಆಯ್ಕೆ ಯಾಗಿದ್ದಾರೆ.

Banner Ad

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಿ ವಿಜೇತರ ಹೆಸರನ್ನು ಘೋಷಿಸಿದ್ದಾರೆ.

ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯುವ ಕದಂಬೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಪಂಪ ಪ್ರಶಸ್ತಿಯನ್ನು ವಿತರಣೆ ಮಾಡುತ್ತಿದ್ದರು. ನವೆಂಬರ್ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಕದಂಬೋತ್ಸವ ಕಾರ್ಯಕ್ರಮವು ಎಪ್ರಿಲ್ ಅಂತ್ಯವಾಗುತ್ತಿದ್ದರೂ ನಡೆದಿಲ್ಲ.ಈ ವರ್ಷ ಕದಂಬೋತ್ಸವ ನಡೆಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಹಾಗಾಗಿ ಬೆಂಗಳೂರಿನಲ್ಲೇ ಪಂಪ ಪ್ರಶಸ್ತಿ ವಿತರಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ.

Banner Ad