ಸುದ್ದಿ ಕನ್ನಡ ವಾರ್ತೆ
ಶಿರಸಿ ನಗರದ ಮಾರಿಕಾಂಬಾ ದೇವಸ್ಥಾನದ ಮುಂಭಾಗದಲ್ಲಿ ಮಾರಿಕಾಂಬಾ ದೇವಸ್ಥಾನದ ವತಿಯಿಂದ ನೂತನವಾಗಿ ನಿರ್ಮಿಸಿರುವ ಪೊಲೀಸ್ ಸಹಾಯ ಘಟಕವನ್ನು ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು.
ಅಲ್ಲಿ ಮಾತನಾಡಿದ ಅವರು,
ದೇವಸ್ಥಾನಕ್ಕೆ ಬರುವ ಭಕ್ತರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಮಾರಿಕಾಂಬಾ ದೇವಸ್ಥಾನದ ವತಿಯಿಂದ ಪೊಲೀಸ್ ಚೌಕಿಯನ್ನು ನಿರ್ಮಾಣ ಮಾಡಲಾಗಿದೆ. ಅದನ್ನು ಇಲಾಖೆ ಗೆ ಹಸ್ತಾಂತರಿಸುತ್ತಿದ್ದೇವೆ ಮಾರಿಗುಡಿ ರಸ್ತೆ ಅಗಲೀಕರಣ ಮಾಡುವ ಉದ್ದೇಶವಿದೆ. ಹಾಗಾಗಿ ಹೊಸ ಜಾಗದಲ್ಲಿ ಪೊಲೀಸ್ ಸಹಾಯ ಘಟಕವನ್ನು ನಿರ್ಮಾಣ ಮಾಡಲಾಗಿದೆ.ಸಿಸಿ ಟಿವಿ ಕ್ಯಾಮೆರಾ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಸ್ತೆ ಅಗಲೀಕರಣಕ್ಕೆ ಸಹಕಾರ ನೀಡಬೇಕು. ಪೊಲೀಸ್ ಇಲಾಖೆ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು.ಯಾವುದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಆರ್ ಜಿ ನಾಯ್ಕ , ಡಿವೈಎಸ್ಪಿ ಗೀತಾ ಪಾಟೀಲ್, ದೇವಸ್ಥಾನದ ಧರ್ಮದರ್ಶಿ ಮಂಡಳಿ ಸದಸ್ಯರು ಸೇರಿದಂತೆ ಹಲವರು ಇದ್ದರು.
ನೂತನ ಪೊಲೀಸ್ ಸಹಾಯ ಘಟಕ ಉದ್ಘಾಟಿಸಿದ ಶಾಸಕ ಭೀಮಣ್ಣ ನಾಯ್ಕ
