ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಅವೇಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅವೇಡಾದಲ್ಲಿ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ನಿಮಿತ್ತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲೆಯ ಮುಖ್ಯಶಿಕ್ಷಕರಾದ ರೋಹಿದಾಸ ಮಡಿವಾಳರವರು ಮಾತನಾಡಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತೇವೆ,ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ಶಿಕ್ಷಕರು ವೃತ್ತಿಯಿಂದ ನಿವೃತ್ತರಾದರು, ಜನಮಾನಸದಲ್ಲಿ ನಿರಂತರವಾಗಿರುತ್ತಾರೆ,ಗುರು ಶಿಷ್ಯರ ಸಂಬಂಧ ನಿರಂತರ,ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನು ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಅನನ್ಯ,ಶಿಕ್ಷಕರ ವೃತ್ತಿಯಲ್ಲಿ ಇರುವುದು
ತೃಪ್ತಿ ತಂದಿದೆ ಎಂದರು.
ಹಾಗೆಯೇ ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿಯರಾದ ಉಷಾ ಜೋಶಿ, ದೀಪಾ ನಾಯ್ಕ ಕಾರ್ಯಕ್ರಮದ ಕುರಿತು ಸಂದರ್ಭೋಚಿತವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಎಲ್ಲಾ ಶಿಕ್ಷಕರು ಸೇರಿ ಉಚಿತ ಟೀ – ಶರ್ಟ್ ವಿತರಣೆ ಮಾಡಿದರು. ಶಾಲಾ ಅಡಳಿತ ಮಂಡಳಿಯವರು, ಪಾಲಕರು,ಪೋಷಕರು ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.