Banner Ad

ಸುದ್ದಿ ಕನ್ನಡ ವಾರ್ತೆ
ಬನವಾಸಿ: ಶಿವಮೊಗ್ಗದಿಂದ
ಶಿರಸಿ ಕಡೆಗೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಮೀಪದ ರಾಮತೀರ್ಥ ಕೆರೆಯ ಬಳಿ ಶಿರಸಿ-ಹೊಸನಗರ ತಿರುವಿನಲ್ಲಿ ಪಲ್ಟಿಯಾಗಿದೆ. ರಾಜ್ಯ ಹೆದ್ದಾರಿ
ಶನಿವಾರ ರಾತ್ರಿ 10 ಗಂಟೆಗೆ ಹೆದ್ದಾರಿ ಪಕ್ಕದಲ್ಲಿದ್ದ ಕೆರೆಯ ಬಳಿ ಗದ್ದೆಗೆ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣ ಹಾನಿಯಾಗಿದ್ದು ಲಾರಿಯೊಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾನೆ.

Banner Ad
Banner Ad