ಸುದ್ದಿ ಕನ್ನಡ ವಾರ್ತೆ
.ಜೋಯಿಡಾ:ತಾಲೂಕಿನ ಕೇಂದ್ರ ಸ್ಥಾನದಲ್ಲಿ ನಡೆದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ,NSS ನಗರಬಾವಿ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರೆ,ಜೈ ಹನುಮಾನ್ ಯುವಕ ಮಂಡಲ ತಂಡವು (ರನ್ನರ್ ಅಪ್) ದ್ವಿತೀಯ ಸ್ಥಾನ ಪಡೆಯಿತು. ಎರಡು ದಿನಗಳ ಕಾಲ ನಡೆದ ಕ್ರಿಕೆಟ್ ಟೂರ್ನಿಯಲ್ಲಿ ಗ್ರಾಮೀಣ ತಂಡಗಳು ಭಾಗವಹಿಸಿದ್ದವು.ಅಂತಿಮ ದಿನದ ಪೈನಲ್ ಪಂದ್ಯದಲ್ಲಿ ನಗರಬಾವಿ ಹಾಗೂ ಜೈ ಹನುಮಾನ್ ತಂಡಗಳ ನಡುವಿನ ಪಂದ್ಯದಲ್ಲಿ NSS ನಗರಬಾವಿ ತಂಡವು ಜೈ ಹನುಮಾನ್ ಯುವಕ ಮಂಡಲ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.ಜೈ ಹನುಮಾನ್ ಯುವಕ ಮಂಡಲ ತಂಡವು ಉತ್ತಮ ಪ್ರದರ್ಶನ ನೀಡುವ ಮೂಲಕ (ರನ್ನರ್ ಅಪ್ )ದ್ವಿತೀಯ ಸ್ಥಾನ ಪಡೆಯಿತು.ಈ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದ ನಗರಬಾವಿಯ ತಂಡದವರಿಗೆ ಊರಿನ ಗ್ರಾಮಸ್ಥರು,ಕ್ರೀಡಾಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಸಂತೋಷ ಮಂತೇರೋ,ಶ್ರೀಕಾಂತ ಕಾಂಬಳೆ,ರಾಜೇಶ ಗಾವಡೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
