ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಾಗೋಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಬಾಪೇಲಿ ಕ್ರಾಸ್ ನ
ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ವಿಜ್ಞಾನ ಶಿಕ್ಷಕರಾದ ಶಿವಾನಂದ ಕೆ ಹೆಚ್ ರವರು ಕಳೆದ ಹಲವು ವರ್ಷಗಳಿಂದ ಬಾಪೇಲಿ ಕ್ರಾಸ್ ಪ್ರೌಢ ಶಾಲೆಯಲ್ಲಿ ವಿಜ್ಞಾನ ವಿಷಯದ ಸಹ ಶಿಕ್ಷಕರಾಗಿ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಉತ್ತಮ ಶಿಕ್ಷಣವನ್ನು ನೀಡುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಗಮನಿಸಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರೌಢ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬಗ್ಗೆ ಬಾಪೇಲಿ ಕ್ರಾಸ್ ಪ್ರೌಢ ಶಾಲೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ
ಮೋಹನ ಮಾವಸ್ಕರ ಎಸ್ .ಡಿ. ಎಂ. ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು,ಸದಸ್ಯರು ಗ್ರಾಮ ಪಂಚಾಯತ ಸದಸ್ಯರು, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು , ಹಳೇ ವಿದ್ಯಾರ್ಥಿಗಳು, ಪಾಲಕರು ಮತ್ತು ಊರ ನಾಗರಿಕರು ಉಪಸ್ಥಿತರಿದ್ದರು.