Banner Ad

ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರಲ್ಲಿ ತಾಲೂಕಿನ ಬಳಗಾರ ಕ್ರಾಸ್ ಸಮೀಪದ ಸೇತುವೆಯ ಮೇಲೆ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ.

ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಸರಕು ಸಾಗಿಸುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯ ಮೇಲೆಯೇ ಉರುಳಿ ಬಿದ್ದಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ ಗ್ಲಾಸ್ ಸಾಮಗ್ರಿಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಘಟನೆಯಲ್ಲಿ ಲಾರಿಗೆ ಭಾರೀ ಹಾನಿಯಾಗಿದ್ದು,ಅದೃಷ್ಟವಶಾತ್ ಚಾಲಕ ಮತ್ತು ಸಹಾಯಕ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ.

Banner Ad
Banner Ad