Banner Ad

ಸುದ್ದಿ ಕನ್ನಡ ವಾರ್ತೆ
ಭಟ್ಕಳ : ತಾಲೂಕಿನ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ಪ್ರಕರಣದಲ್ಲಿ ವಾಹನದ ಮಾಲೀಕರಿಗೆ ನ್ಯಾಯಾಲಯ ರೂ.25,000 ದಂಡ ವಿಧಿಸಿ ತೀರ್ಪು ನೀಡಿದೆ. ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದಲ್ಲಿ, ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕನಿಂದ ಚಾಲನೆ ಮಾಡಿಸಿದ ಆರೋಪದಡಿ ಬಸ್ತಿ ಕಾಯ್ಕಿಣಿ ನಿವಾಸಿ ರಾಜೇಶ ನಾಗಪ್ಪ ನಾಯ್ಕ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮುರುಡೇಶ್ವರ ಪಿ.ಎಸ್.ಐ ಹಣಮಂತ ಬಿರಾದಾರ ಅವರು ಮೋಟಾ‌ರ್ ವಾಹನ ಕಾಯ್ದೆಯ ಕಲಂ 5 ಹಾಗೂ 199(ಎ) ಅನ್ವಯ ದೋಷಾರೋಪಣಾ ಪತ್ರವನ್ನು ಭಟ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ವಾಹನದ ಮಾಲೀಕರಾದ ರಾಜೇಶ ನಾಗಪ್ಪ ನಾಯ್ಕ ಅವರಿಗೆ ರೂ.25 ಸಾವಿರ ದ೦ಡ ವಿಧಿಸಿದೆ. ಅಪ್ರಾಪ್ತನಿಗೆ ವಾಹನ ನೀಡಿದ್ದಕ್ಕಾಗಿ ತಂದೆಗೆ ದಂಡ ವಿಧಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಅಪ್ರಾಪ್ತರಿಗೆ ವಾಹನ ನೀಡುವುದು ಗಂಭೀರ ಅಪರಾಧವಾಗಿದ್ದು, ಇಂತಹ ಘಟನೆಗಳು ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Banner Ad
Banner Ad