ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯ ಹಿರಿಯ ಚೇತನ, ಸಜ್ಜನ ರಾಜಕಾರಣಿ ಹಾಗೂ ಜಿಲ್ಲಾ ಪಂಚಾಯತ್ನ ಪ್ರಥಮ ಅಧ್ಯಕ್ಷರಾದ ರಮಾನಂದ ನಾಯಕ ಅವರ ನಿಧನದ ವಾರ್ತೆ ಅತ್ಯಂತ ದುಃಖದಾಯಕವಾಗಿದೆ.
ಜಿಲ್ಲೆಯ ಅಭಿವೃದ್ಧಿ ಮತ್ತು ಜನಪರ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು, ವಿಶೇಷವಾಗಿ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ನಿರ್ಮಾಣಕ್ಕಾಗಿ ನಡೆಸಿದ ಹೋರಾಟ ಜಿಲ್ಲೆಯ ಇತಿಹಾಸದಲ್ಲಿ ಅವಿಸ್ಮರಣೀಯವಾಗಿದೆ.
ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗದೆ ಸಹಕಾರಿ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲೂ ತಮ್ಮದೇ ಆದ ವಿಶೇಷ ಕೊಡುಗೆ ನೀಡಿದ್ದ ಅವರು, ಪಕ್ಷಾತೀತವಾಗಿ ಎಲ್ಲರ ಪ್ರೀತಿ ಮತ್ತು ವಿಶ್ವಾಸಕ್ಕೆ ಪಾತ್ರರಾದ ಜನಾನುರಾಗಿ ನಾಯಕರಾಗಿದ್ದರು. ಅವರ ನಿಧನದಿಂದ ಜಿಲ್ಲೆಯು ಒಬ್ಬ ಮಾರ್ಗದರ್ಶಕ ಹಾಗೂ ಅಭಿವೃದ್ಧಿ ಪರ ಚಿಂತಕನನ್ನು ಕಳೆದುಕೊಂಡಂತಾಗಿದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.ಎಂದು ಸಂಸದರು ಪ್ರಕಟಣೆ ಯಲ್ಲಿ ಹೇಳಿದ್ದಾರೆ
