Banner Ad

ಸುದ್ದಿ ಕನ್ನಡ ವಾರ್ತೆ
ಕುಮಟಾ: ತಾಲೂಕಿನ ಬಗ್ಗೋಣದ ಹೆಮ್ಮೆಯ ಪುತ್ರಿ ಸಹನಾ ಗಣೇಶ್ ಶೇಟ್ ಅವರು ಕುವೆಂಪು ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದಲ್ಲಿ ಅಭೂತಪೂರ್ವ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಶಿವಮೊಗ್ಗದ ಪ್ರತಿಷ್ಠಿತ ಸಹ್ಯಾದ್ರಿ ವಾಣಿಜ್ಯ ಮತ್ತು ವ್ಯವಸ್ಥಾಪನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದ ಸಹನಾ, ಇತ್ತೀಚೆಗೆ ಪ್ರಕಟವಾದ ಫಲಿತಾಂಶದಲ್ಲಿ ಅತೀ ಹೆಚ್ಚು ಅಂಕಗಳಿಸಿ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Banner Ad

ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ವಿಶ್ವವಿದ್ಯಾನಿಲಯವು 5 ಚಿನ್ನದ ಪದಕಗಳನ್ನು ನೀಡಿ ಗೌರವಿಸಿದೆ.
ಸಹನಾ ಕುಮಟಾದ ಬಗ್ಗೋಣ ನಿವಾಸಿಗಳಾದ ಗೀತಾ ಮತ್ತು ಗಣೇಶ ಶಾಂತಾರಾಮ ಶೇಟ್ ದಂಪತಿ ಪುತ್ರಿ ಗ್ರಾಮೀಣ ಭಾಗದ ಪ್ರತಿಭೆಯೊಂದು ರಾಜ್ಯ ಮಟ್ಟದ ವಿಶ್ವವಿದ್ಯಾನಿಲಯದಲ್ಲಿ ಐದು ಚಿನ್ನದ ಪದಕಗಳನ್ನು ಬಾಚಿಕೊಳ್ಳುವ ಮೂಲಕ ಕುಮಟಾ ತಾಲೂಕಿನ ಹೆಸರನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಮಿನುಗಿಸಿದ್ದಾರೆ.

Banner Ad