ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಬೆಳಗಾವಿಯಲ್ಲಿ ನಡೆದ ತಮ್ಮ ಸಂಬಂಧಿಕರ ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಮಿನಿ ಬಸ್ ಅಪಘಾತಕ್ಕೀಡಾಗಿದೆ.
ಈ ಬಸ್ ನಲ್ಲಿ ಸುಮಾರು 10 ಜನರು ಪ್ರಯಾಣುಸುತ್ತಿದ್ದರು. ತಮ್ಮ ಮನೆಗೆ ತಲುಪಲು ಇನ್ನು ಕೇವಲ ಎರಡೇ ಕಿಲೋಮೀಟರ್ ಇರುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ.
ಈ ಘಟನೆಯಿಂದಾಗಿ ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
