Banner Ad

ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಪೊಲೀಸ್‌ ವಸತಿ ಸಮುಚ್ಚಯದಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವರ 27ನೇ ವರ್ಷದ ವರ್ಧಂತಿ ಉತ್ಸವ ವಿಜೃಂಭಣೆಯಿಂದ ನಡೆಯಿತು.

ಶ್ರೀ ದೇವರಿಗೆ ವಿಶೇಷ ಪೂಜೆ, ಬೆಳ್ಳಿಯ ಆಭರಣ, ಹೂವಿನ ಅಲಂಕಾರ ಮಾಡಲಾಗಿತ್ತು. ಕಲಾವೃದ್ಧಿ ಹವನ ಮತ್ತು ಗಣಪತಿ ಹವನ, ಪೂರ್ಣಾಹುತಿ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ಶಾಸಕ ಶಿವರಾಮ ಹೆಬ್ಬಾ‌ರ್, ಡಿವೈಎಸ್‌ಪಿ ಗೀತಾ ಪಾಟೀಲ್‌, ಪೊಲೀಸ್ ಅಧಿಕಾರಿಗಳು,ಸಿಬ್ಬಂದಿಗಳು, ಅವರ ಕುಟುಂಬದವರು, ಸಾರ್ವಜನಿಕರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಣ್ಣು ಕಾಯಿ ಸೇವೆ ಸಮರ್ಪಿಸಿ ಅನ್ನ ಪ್ರಸಾದ ಸ್ವೀಕರಿಸಿದರು.

Banner Ad
Banner Ad