ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ತೆರಳಿದ್ದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆಯ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖ ಉಂಟಾಯಿತುಎಂದು ಶಾಸಕರು ಆಡಳಿತ ಸುಧಾರಣಾ ಸಮೀತಿ ಅಧ್ಯಕ್ಷರು ಆದ ಆರ್ ವಿ ದೇಶಪಾಂಡೆ ಅವರು ಕಂಬನಿ ಮಿಡಿದಿದ್ದಾರೆ.

ಇದು ಅತ್ಯಂತ ಹೃದಯವಿದ್ರಾವಕ ಹಾಗೂ ದುರದೃಷ್ಟಕರ ಘಟನೆ. ಅಮೂಲ್ಯ ಜೀವಗಳನ್ನು ಕಳೆದುಕೊಂಡ ಕುಟುಂಬದ ದುಃಖದಲ್ಲಿ ನಾನು ಸಹಭಾಗಿಯಾಗಿದ್ದೇನೆ. ಮೃತರ ಕುಟುಂಬಗಳಿಗೆ ಸರ್ಕಾರ ಮಾನವೀಯ ನೆಲೆಯಲ್ಲಿ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ವಿನಂತಿಸುತ್ತೇನೆ.

ಈ ದುರ್ಘಟನೆಯಲ್ಲಿ ಇನ್ನೂ ಕೆಲವರು ಕಾಣೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಅವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕಾಣೆಯಾದವರು ಸುರಕ್ಷಿತವಾಗಿ ಬದುಕಿ ತಮ್ಮ ಕುಟುಂಬದವರನ್ನು ಸೇರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.ಎಂದು
ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ.