ಸುದ್ದಿ ಕನ್ನಡ ವಾರ್ತೆ
ಮುಂಡಗೋಡ: ಪಟ್ಟಣದ ಸೇರಿದಂತೆ ತಾಲೂಕಿನ
ವಿವಿಧೆಡೆ ಶನಿವಾರ ಮಧ್ಯರಾತ್ರಿ ಸುರಿದ ಧಾರಾಕಾರ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡು ಆಸ್ತಿಪಾಸ್ತಿ ಹಾನಿಯಾಗಿದೆ.

ಮಧ್ಯ ರಾತ್ರಿ ವೇಳೆಗೆ ಪ್ರಾರಂಭವಾದ ಗುಡುಗು, ಸಿಡಿಲು ಮಿಶ್ರಿತ ಗಾಳಿ ಮಳೆಗೆ ಪಟ್ಟಣದ ಹೊರವಲಯ ಯಲ್ಲಾಪುರ ರಸ್ತೆಯಲ್ಲಿ ಮರಗಳು ನೆಲಕ್ಕುರುಳಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು 18 ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ಸುಮಾರು 10 ಕಿಮೀನಷ್ಟು ವಿದ್ಯುತ್ ಲೈನ್ ಹರಿದು ಬಿದ್ದಿದ್ದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು.

ವಿವಿಧ ಕಡೆಗಳಲ್ಲಿ ರಸ್ತೆ ಮೇಲೆ ಮರಗಳು ಉರುಳಿ ಬಿದ್ದ ಪರಿಣಾಮ ಕೆಲ ಮಾರ್ಗಗಳಲ್ಲಿ ವಾಹನ ಸಂಪರ್ಕ ಕಡಿತಗೊಂಡಿತ್ತು.ಭಾನುವಾರ ಬೆಳಿಗ್ಗೆ ಸಂಬಂಧಿಸಿದ ಇಲಾಖೆ ಸಿಬ್ಬಂದಿ ಸಾಕಷ್ಟು ಹರಸಾಹಸಪಟ್ಟು ಗಿಡ ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.