ಸುದ್ದಿ ಕನ್ನಡ ವಾರ್ತೆ

ಭಟ್ಕಳ:ತಾಲೂಕಿನ ಸಮೀಪದ ತಟ್ಟೆಹಕ್ಕಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋದ ಸಂದರ್ಭದಲ್ಲಿ, 11 ಜನರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಅತ್ಯಂತ ದುಃಖಕರ ಹಾಗೂ ಹೃದಯವಿದ್ರಾವಕವಾಗಿದೆ. ವಿಧಿಯ ಕ್ರೂರ ಆಟಕ್ಕೆ ಅಮೂಲ್ಯ ಜೀವಗಳು ಬಲಿಯಾಗಿರುವುದು ಇಡೀ ಸಮಾಜವನ್ನೇ ಕಂಗೆಡಿಸಿದೆ.

​ಇಂದು ಮಾನ್ಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಮೃತರ ಹಾಗೂ ಗಾಯಾಳುಗಳ ಮನೆಗಳಿಗೆ ಭೇಟಿ ನೀಡಿ, ಕರಳುಬಳ್ಳಿಯ ನಂಟನ್ನು ಕಳೆದುಕೊಂಡು ತೀವ್ರ ಆಘಾತದಲ್ಲಿರುವ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು . ಹೋದ ಜೀವಗಳನ್ನು ಮರಳಿ ತರಲು ಸಾಧ್ಯವಿಲ್ಲ, ಆದರೆ ಈ ಕಠಿಣ ಸಮಯದಲ್ಲಿ ನಾವೆಲ್ಲರೂ ಆ ಕುಟುಂಬಗಳ ಜೊತೆಯಾಗಿ ನಿಲ್ಲಬೇಕಿದೆ.

​ಭಗವಂತನು ಮೃತರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಹಾಗೂ ಈ ಭರಿಸಲಾಗದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸಿದರು
​ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಿವಾನಂದ ನಾಯ್ಕ , ಮಾಜಿ ಶಾಸಕರಾದ ಶ್ರೀ ಸುನಿಲ್ ನಾಯ್ಕ, ಜಿಲ್ಲಾ ಅಧ್ಯಕ್ಷರಾದ ಶ್ರೀ ಎನ್. ಎಸ್. ಹೆಗಡೆ, ಭಟ್ಕಳ ಮಂಡಲ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ನಾಯ್ಕ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.