ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ರಾಷ್ಟೀಯ ಹೆದ್ದಾರಿ 52 ರ ಹಳಿಯಾಳ ಕ್ರಾಸ್ ಬಳಿ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಬೈಕ್ ಸವಾರ ಪಟ್ಟಣದ ನೂತನ ನಗರದ ರಾಘವೇಂದ್ರ ಕುಲಕರ್ಣಿ (25 )ಮೃತ ವ್ಯಕ್ತಿ. ಈತ ಕಲಘಟಗಿ ಕಡೆಯಿಂದ ಯಲ್ಲಾಪುರಕ್ಕೆ ಬರುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು,ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.