ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಶ್ರೀರಾಮ ಪ್ರೌಢಶಾಲೆ (ಜೋಯಿಡಾ ಹೈಸ್ಕೂಲ್) ಆವರಣದ ಗಾರ್ಡನ್‌ನಲ್ಲಿ ವಿಶಾಲವಾಗಿ ಬೆಳೆದಿದ್ದ ಕೆಲವು ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಾಗುವ ಸ್ಥಿತಿಯಲ್ಲಿದ್ದವು. ಭಾರಿ ಮಳೆ ಹಾಗೂ ಗಾಳಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಯಾವುದೇ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆ ಮರಗಳ ಕೊಂಬೆಗಳನ್ನು ಕತ್ತರಿಸಿ, ಅಗತ್ಯವಿದ್ದ ಮರಗಳನ್ನು ತೆರವುಗೊಳಿಸಲಾಯಿತು.
ಈ ಕಾರ್ಯವನ್ನು ಸುರಕ್ಷಿತವಾಗಿ ನಡೆಸಲು ಸೋಮವಾರ ಜೋಯಿಡಾ ಪ್ರದೇಶದಲ್ಲಿ ವಿದ್ಯುತ್ ಸರಬರಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಸಂಜೆ ಸುಮಾರು 7:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಯಿತು. ಸುರಕ್ಷತೆಯನ್ನು ಪ್ರಮುಖವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.
