ಸುದ್ದಿ ಕನ್ನಡ ವಾರ್ತೆ
ದಾಂಡೇಲಿ:ತಾಲೂಕಿನ ಹಸನಮಾಳ ಗ್ರಾಮದಲ್ಲಿ ಪ್ರಾಣಿಯೊಂದನ್ನು ನುಂಗಿಕೊಂಡು ಮನೆಯೊಂದರ ಅಂಗಳಕ್ಕೆ ನುಗ್ಗಿದ್ದ ಭಾರಿ ಗಾತ್ರದ ಹೆಬ್ಬಾವು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಉರಗಪ್ರೇಮಿ ರಜಾಕ್ ಶಾ ಅವರು ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದರು.
ನಂತರ ಅರಣ್ಯ ಇಲಾಖೆಯ ಮಾರ್ಗಸೂಚಿಯಂತೆ ಹೆಬ್ಬಾವನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಬಿಡುಗಡೆ ಮಾಡಲಾಯಿತು. ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಕಾಡು ಪ್ರದೇಶಗಳಿಂದ ಹಾವುಗಳು ಜನವಸತಿ ಪ್ರದೇಶಗಳಿಗೆ ಬರುವ ಸಾಧ್ಯತೆ ಹೆಚ್ಚಿದ್ದು, ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ಆತಂಕ ಪಡದೆ ತಕ್ಷಣ ಉರಗ ರಕ್ಷಕರು ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
