ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ₹59.5 ಕೋಟಿ ಮಂಜೂರುಮಾಡಿರುವುದಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದಹೇಳಿದ್ದಾರೆ
ಕೇಂದ್ರ ರಸ್ತೆ ಅಭಿವೃದ್ಧಿ ನಿಧಿ (CRIF) 2026-27ನೇ ಸಾಲಿನ ಯೋಜನೆಯಡಿ, ಉತ್ತರ ಕನ್ನಡ ಲೋಕಸಭಾ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಆಯ್ದ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು ₹59.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಜಿಲ್ಲೆಯ ಪ್ರಮುಖ ರಸ್ತೆಗಳ ಸುಧಾರಣೆಗೆ ಈ ಅನುದಾನವನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದರು ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.ಎಂದು
ಸಂಸದರ ಕಚೇರಿ, ಶಿರಸಿ.ಯಿಂದ ಪ್ರಕಟಿಸಲಾಗಿದೆ.
