ಸುದ್ದಿ ಕನ್ನಡ ವಾರ್ತೆ
ಜೊಯಿಡಾ : ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣೆ ಪರವಾನಗಿ ಪಡೆಯಲು ಟಾಟಾ ಪವರ ಕಂಪನಿ ಕರ್ನಾಟಕ ವಿದ್ಯುತ ಶಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸುವುದು ರೈತಾಬಿ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಅಪಾಯಕಾರಿ ಸಂಗತಿ. ಈ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜೊಯಿಡಾ ತಾಲೂಕ ಸಮಿತಿ ವತಿಯಿಂದ ಆಕ್ಷೇಪಣೆ ಸಲ್ಲಿಸಲಾಗಿದೆ.ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜೊಯಿಡಾ ತಾಲೂಕ ಅಧ್ಯಕ್ಷ ಪ್ರೇಮಾನಂದ ವೇಳಿಫ ತಿಳಿಸಿದ್ದಾರೆ.
ಈ ವಿಷಯದಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯುತ ಖಾಸಗೀಕರಣವಾದರೆ ಸರ್ಕಾರದಿಂದ ಅನುಷ್ಠಾನ ಗೊಳ್ಳುತ್ತಿರುವ ವಿವಿಧ ಕಲ್ಯಾಣ ಯೋಜನೆಗಳು ಬಂದ ಆಗುವ ಸಾಧ್ಯತೆಗಳಿವೆ. ರೈತರ ಪಂಪಸೆಟಗಳಿಗೆ ಉಚಿತ ವಿದ್ಯುತ್ ಬಂದ ಆಗಲಿದೆ. ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯಿಂದ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಟಾ ಕಂಪನಿಯು ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಪರವಾನಗಿ ಕೋರಿದೆ. ಈ ಕಂಪನಿಯ ಯಾವುದೇ ವಿಶ್ವಾಸಾರ್ಹ ವಂಶಗಳನ್ನು ಹೊಂದಿರದೇ ಇರುವದರಿಂದ ಅವರ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.
ಖಾಸಗೀಕರಣ ನೇರ ನಗದು ವರ್ಗಾವಣೆ ಹಾಗು ಸ್ಮಾರ್ಟ್ ಮೀಟರ್ ಅಳವಡಿಕೆಯಂತಹ ರೈತ ವಿರೋಧಿ ಕ್ರಮಗಳಿಗೆ ತುತ್ತಾಗಿ ಕೃಷಿ ಕ್ಷೇತ್ರ ಕುಂಠಿತವಾಗಿ ಆಹಾರ ಭದ್ರತೆಗೆ ತೊಂದರೆ ಉಂಟಾಗಬಹುದು. ನೌಕರರ ಭದ್ರತೆಗೆ ಕಂಟಕವಾಗಲಿದೆ.
ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಗಳಿಗೆ ಅಂಚೆ ಮೂಲಕ ಆಕ್ಷೇಪಣೆಯನ್ನು ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜೊಯಿಡಾ ತಾಲೂಕ ಅಧ್ಯಕ್ಷ ಪ್ರೇಮಾನಂದ ವೆಲಿಪ್, ಕಾರ್ಯದರ್ಶಿ ರಾಜೇಶ ಗಾವಡಾ, ಖಜಾಂಚಿ ಶಾಂತಾ ವೆಲಿಪ್, ಹಾಗೂ ಕೃಷ್ಣಾ ಗಾವಡಾ ಉಪಸ್ಥಿತರಿದ್ದರು.
