Banner Ad

ಸುದ್ದಿ ಕನ್ನಡ ವಾರ್ತೆ
ಜೋಯಿಡಾ: ತಾಲೂಕಿನ ಕುಂಬಾರವಾಡ ಸರ್ಕಾರಿ
ಪ್ರೌಢಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ರಕ್ಷಿತಾ ವಿಷ್ಣು ವೇಳಿಪ ಅವರನ್ನು ಅಳ್ಳಾವರ ಸಮೀಪದ ಮದನಹಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ Manipal Foundation ಹಾಗೂ Mahamaya Foundation ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಸ್ಮರಣಿಕೆ ಹಾಗೂ ಗೌರವ ನೀಡಿ ಉತ್ತೇಜಿಸಲಾಯಿತು.

Banner Ad

 

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಮುಂದಿನ ವಿದ್ಯಾಭ್ಯಾಸಕ್ಕೆ ಸ್ಪೂರ್ತಿ ತುಂಬುವ ಕಾರ್ಯವನ್ನು ಈ ಎರಡು ಪ್ರತಿಷ್ಠಾನಗಳು ನಿರಂತರವಾಗಿ ನಡೆಸುತ್ತಿವೆ.
ಈ ಸಂದರ್ಭದಲ್ಲಿ ರಕ್ಷಿತಾ ವಿಷ್ಣು ವೇಳಿಪ ಅವರ ಸಾಧನೆಯನ್ನು ಶ್ಲಾಘಿಸಿದ ಗಣ್ಯರು, ಇದೇ ರೀತಿಯ ಶ್ರದ್ದೆ ಮತ್ತು ಪರಿಶ್ರಮದಿಂದ ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇನ್ನಷ್ಟು ಉನ್ನತ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

Banner Ad