ಸುದ್ದಿ ಕನ್ನಡ ವಾರ್ತೆ
ಇಂದಿನಿಂದ ಪ್ರಾರಂಭವಾಗಿರುವ ಮನೆಮನೆಗೂ ಬಂದು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವ “ವಿಶೇಷ ತೀವ್ರ ಪರಿಷ್ಕರಣೆ” (SIR) ಪ್ರಕ್ರಿಯೆಯಲ್ಲಿ ಶಿರಸಿ-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಕ್ರಿಯವಾಗಿ ಭಾಗವಹಿಸಿದರು.
ತಮ್ಮ ಮತದಾರರ ಗುರುತಿನ ಚೀಟಿಯ ಪರಿಷ್ಕರಣೆಗೆ ಸಂಬಂಧಿಸಿದ ನಿಗದಿತ ಫಾರ್ಮ್ ಅನ್ನು ಭರ್ತಿ ಮಾಡಿದ ಸಂಸದರು, ಅದನ್ನು ತಮ್ಮ ಭಾಗದ ಬಿಎಲ್ಒ (BLO) ಅಧಿಕಾರಿಗಳಿಗೆ ಅಧಿಕೃತವಾಗಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿರಸಿ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಅವರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಂಸದರು, “ಮತದಾನ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವೂ ಹೌದು. ಸಾರ್ವಜನಿಕರು ಈ ಮತದಾರ ಪಟ್ಟಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿ, ಬಿಎಲ್ಒ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಸಹಕರಿಸಬೇಕು. ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಈ ಮೂಲಕ ಕರೆ ನೀಡಿದರು. ಈ ಪ್ರಕಟಣೆ ಯನ್ನು ಸಂಸದರೆ ಕಾರ್ಯಲಯ ದಿಂದ ಕಳುಹಿಸಲಾಗಿದೆ.
