ಸುದ್ದಿ ಕನ್ನಡ ವಾರ್ತೆ

ಜೋಯಿಡಾ: ತಾಲೂಕಿನ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು,ಹಳಿಯಾಳ ಜೋಯಿಡಾ ಕ್ಷೇತ್ರದ ಶಾಸಕರಾದ ಆರ್. ವಿ. ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ತಾಲೂಕಾ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಆರ್.ವಿ.ದೇಶಪಾಂಡೆ ಅವರು ನಮ್ಮ ಸರ್ಕಾರ ಬಡವರಿಗೆ, ಮಹಿಳೆಯರಿಗೆ ಅನುಕೂಲವಾಗುವ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.ಅಧಿಕಾರಿ ವರ್ಗದವರು ನಿಜವಾದ ಬಡವರನ್ನು,ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು.ಪಿಂಚಣಿ ಬರದೇ ಇದ್ದವರು ಗ್ರಾಮ ಆಡಳಿತ ಅಧಿಕಾರಿಗಳನ್ನು, ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಿ ಸೂಕ್ತ ದಾಖಲಾತಿಗಳನ್ನು ನೀಡಿ ಸೌಲಭ್ಯ ಪಡೆದುಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧವಾ ವೇತನ, ಅಂಗವಿಕಲ ವೇತನ,ವೃಧ್ಯಾಪ ವೇತನ,ಮಂಜೂರಾತಿ ಪತ್ರಗಳನ್ನು, ಪೌತಿ ಆಂದೋಲನದಲ್ಲಿ ಮಂಜೂರಾದ ಜಮೀನಿನ ವಾರಸುದಾರರಿಗೆ ಪಹಣಿ ಪತ್ರಿಕೆಯನ್ನು ರೈತರಿಗೆ ನೀಡಿದರು. ಕಾರ್ಯಕ್ರಮದಲ್ಲಿ ಜೋಯಿಡಾ ತಹಶೀಲ್ದಾರ್ ಮಂಜುನಾಥ ಮುನ್ನೋ ಳ್ಳಿ,ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿ ಎನ್ ಭಾರತಿ ಮೇಡಂ, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು, ಕೆ.ಪಿ.ಸಿ.ಸಿ ಸದಸ್ಯ ಸದಾನಂದ ದಬಗಾರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಗಾವಡೆ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಮಂಗೇಶ ಕಾಮತ, ಸಂಜಯ ಹಣಬರ,ಮಹಿಳಾ ಪ್ರತಿನಿಧಿಗಳು,ಸ್ವಸಹಾಯ ಸಂಘಗಳ ಸದಸ್ಯರು, ತಾಲೂಕಿನ ವಿವಿಧ ಗ್ರಾಮ ಪಂಚಾಯತದ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರು,ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.