ಸುದ್ದಿ ಕನ್ನಡ ವಾರ್ತೆ
ಶಿರಸಿ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ನಗರದ ಶ್ರೀ ಮಾರಿಕಾಂಬಾ ದೇವಸ್ಥಾನದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳು ಸೋಮವಾರ ಶಿರಸಿಯ ಸಂಸದರ ಕಚೇರಿಗೆ ಭೇಟಿ ನೀಡಿ ಸಂಸದರಿಗೆ ಶ್ರೀದೇವಿಯ ಪ್ರಸಾದವನ್ನು ನೀಡಿ, ಗೌರವಪೂರ್ವಕವಾಗಿ ಸನ್ಮಾನಿಸಿದರು.

​ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ಅವರು ನಿಮ್ಮ ಆಡಳಿತ ಅವಧಿಯಲ್ಲಿ ಐತಿಹಾಸಿಕ ಮಾರಿಕಾಂಬಾ ದೇವಾಲಯವು ಇನ್ನಷ್ಟು ಅಭಿವೃದ್ಧಿ ಪಥದತ್ತ ಸಾಗಲಿ ಮತ್ತು ಭಕ್ತಾದಿಗಳಿಗೆ ಉತ್ತಮ ಸೌಲಭ್ಯಗಳು ನಿಮ್ಮಿಂದ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು.

​ಅಲ್ಲದೆ ದೇವಸ್ಥಾನದ ಆಡಳಿತವು ಅತ್ಯಂತ ಯಶಸ್ವಿಯಾಗಿ ಮುನ್ನಡೆಯಲು ನಮ್ಮ ಸಂಪೂರ್ಣ ಸಹಕಾರ ಮತ್ತು ಬೆಂಬಲ ಸದಾ ಇರಲಿದೆ ಭರವಸೆ ನೀಡಿದರು.
​ಈ ಸಂದರ್ಭದಲ್ಲಿ ದೇವಸ್ಥಾನದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ರವಿ ಬೆಳ್ಳಿಮನೆ, ಉಪಾಧ್ಯಕ್ಷ ಅಶೋಕ ಪವಾರ ಮತ್ತು ಧರ್ಮದರ್ಶಿಗಳಾದ ವಿನಾಯಕ ಶೇಟ್, ಕೇಶವ ಹೆಗಡೆ, ಅರ್ಚನಾ ರಾಘವೇಂದ್ರ ಹೊನ್ನಾವರ ಇದ್ದರು.