ಸುದ್ದಿ ಕನ್ನಡ
​ಅಂಕೋಲಾ: ತಾಲೂಕಿನ ಅವರ್ಸಾ ಕವಲಗದ್ದೆ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬೆಂಗಳೂರು-ಗೋವಾ ಮಾರ್ಗದಲ್ಲಿ ಸೀಬರ್ಡ್ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.

 

ಮರಕ್ಕೆ ಸಿಲುಕಿ ನಿಂತಿದ್ದರಿಂದ ಭಾರೀ ಅನಾಹುತ ತಪ್ಪಿದೆ.
​ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರಿಗೆ ಗಂಭೀರ ಹಾಗೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣದ ಕುರಿತು ತನಿಖೆ ಮುಂದುವರಿದಿದೆ.