ಸುದ್ದಿ ಕನ್ನಡ
ಶಿರಸಿ: ತಾಲೂಕಿನ ಶಿರಸಿ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಹುಲಿದೇವಿನಸರ ಸಮೀಪ ಖಾಸಗಿ ಬಸ್ವೊಂದು ಚಾಲಕರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗಟಾರಕ್ಕೆ ಇಳಿದ ಘಟನೆ ನಡೆದಿದೆ.
ಘಟನೆಯ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತರಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳು ಸಂಭವಿಸಿಲ್ಲ. ಆದರೆ, ಏಕಾಏಕಿ ನಡೆದ ಅಪಘಾತದಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಸ್ಥಳೀಯರ ಪ್ರಕಾರ, ರಸ್ತೆಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದೇ ಇರುವುದರ ಜೊತೆಗೆ ಅಗತ್ಯ ಎಚ್ಚರಿಕೆ ಫಲಕಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳ ಕೊರತೆ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ವಾಹನ ಸಂಚಾರಕ್ಕೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
