ಸುದ್ದಿ ಕನ್ನಡ ವಾರ್ತೆ
ಕಾರವಾರ: ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಯವರು ಕಾರವಾರದ ಜಿಲ್ಲಾ ಪಂಚಾಯತ ಆವರಣದಲ್ಲಿ ಗಿಡ ನೆಡುವ ಮೂಲಕ ,ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ನಡೆಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡು,ಕೆಲವು ಹಳ್ಳಿಗಳಲ್ಲಿ ಕಾಮಗಾರಿಯಿಂದ ಗ್ರಾಮಸ್ಥರಿಗೆ ಉಂಟಾಗಿರುವ ತೊಂದರೆಗಳ ಬಗ್ಗೆ ಸಂಸದರ ಗಮನಕ್ಕೆ ಬಂದಿತ್ತು. ಈ ಕುರಿತು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಪರಿಣಾಮಕಾರಿಯಾಗಿ ಪ್ರತಿ ಹಳ್ಳಿ ಮಟ್ಟಕ್ಕೂ ತಲುಪಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ನಿರ್ದೇಶಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು,ಜಿಲ್ಲಾ ಪೊಲೀಸ್ ಅಧಿಕ್ಷಕರು, ಹಾಗೂ ದಿಶಾ ಸಮಿತಿಯ ಸದಸ್ಯರುಗಳು, ಉಪಸ್ಥಿತರಿದ್ದರು.