ಸುದ್ದಿ ಕನ್ನಡ ವಾರ್ತೆ
. ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ಯೂಟರ್ನ್ ಬಳಿ ಎರಡು ದಿನಗಳ ಹಿಂದೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದ,ಯಲ್ಲಾಪುರ ಕಡೆಯಿಂದ ಅಂಕೋಲಾದ ಕಡೆಗೆ ಹೊರಟಿದ್ದ ಕಂಟೇನರ್ ಲಾರಿಯನ್ನು ತೆರವುಗೊಳಿಸುವ ವೇಳೆ ಮಂಗಳವಾರ ಎರಡು ತಾಸುಗಳ ಕಾಲ ವಾಹನಗಳ ಸಂಚಾರ ಸ್ಥಗಿತಗೊಂಡಿತು.
ಅದನ್ನು ಮಂಗಳವಾರ ಬೆಳಗ್ಗೆ ಕ್ರೇನ್ ಮೂಲಕ ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಎರಡು ತಾಸುಗಳ ಕಾಲ ವಾಹನಗಳ ಸಂಚಾರ ಸ್ಥಗಿತಗೊಂಡಿತು. ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಲಾರಿ ತೆರವುಗೊಂಡ ನಂತರ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
