ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ:ತಾಲೂಕಿನ ಆರತಿಬೈಲ್ ಬಳಿ ಗುರುವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ಆದ ಜೀವ ಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮೈಕ್ರೋ ಬ್ಲಾಗ್ ತಾಣ ಎಕ್ಸ್‌ನಲ್ಲಿ ಈ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ನರೇಂದ್ರ ಮೋದಿ ಅವರು ‘ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದ ಅಪಘಾತ ಅತ್ಯಂತ ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳ ಜೊತೆ ನಾನಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಪ್ರಧಾನಿ ಹೇಳಿದ್ದಾರೆ.
