ಸುದ್ದಿ ಕನ್ನಡ ವಾರ್ತೆ
​ಯಲ್ಲಾಪುರ:ತಾಲೂಕಿನ  ಕಂಚನಳ್ಳಿಯಲ್ಲಿ ನಿಂತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದು ಕಾರು ಜಖಂಗೊಂಡ ಘಟನೆ ನಡೆದಿದೆ.

ಕಂಚಿನಳ್ಳಿಯ ವಿಘ್ನೇಶ್ವರ ಅವರ ಮನೆಯಲ್ಲಿ ಶುಕ್ರವಾರ ಧಾರ್ಮಿಕ ಕಾರ್ಯಕ್ರಮವಿದ್ದು, ಅದರಲ್ಲಿ ಪಾಲ್ಗೊಳ್ಳಲು ಬಂದವರು ಕಾರನ್ನು ಗೇಟ್ ಹೊರಗಡೆ ಪಾರ್ಕ್ ಮಾಡಿದ್ದರು.

ಮಧ್ಯಾಹ್ನ 2:30ರ ಹೊತ್ತಿಗೆ ಏಕಾಏಕಿ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ. ಕಾರಿನಲ್ಲಿ ಹಾಗೂ ಅಕ್ಕಪಕ್ಕ ಯಾರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.