ಸುದ್ದಿ ಕನ್ನಡ ವಾರ್ತೆ
ಮುಂಡಗೋಡ:ತಾಲೂಕಿನ ಹುನಗುಂದ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ರೈತನೋರ್ವ ತನ್ನ ಗದ್ದೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಫಕ್ಕೀರಗೌಡ ಬಸನಗೌಡ ಪಾಟೀಲ್ (42) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಎರಡು ಎಕರೆ ಜಮೀನು ಹೊಂದಿದ್ದ ರೈತ, ಸ್ಥಳೀಯ ಸಹಕಾರಿ ಸಂಘ, ಗ್ರಾಮೀಣ ಬ್ಯಾಂಕ್ ಸೇರಿ ಹಲವು ಖಾಸಗಿ ಫೈನಾನ್ಸ್ ಗಳಲ್ಲಿ ಸುಮಾರು 12 ಲಕ್ಷ ರೂ.ಗೂ ಅಧಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಪ್ರಸಕ್ತ ವರ್ಷದಲ್ಲಿ ಮಳೆ ಕೈಕೊಟ್ಟು ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಸಾಲ ತೀರಿಸಲು ಸಾಧ್ಯವಾಗದ ಭಯದಲ್ಲಿ ಮನನೊಂದು ಗದ್ದೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮುಂಡಗೋಡ ತಹಶೀಲ್ದಾರ್ ಎ.ಎಸ್. ಪ್ರಸಾದ, ಶಿರಸಿ ಉಪ ಕೃಷಿ ನಿರ್ದೇಶಕ ಕೆ. ಪಾಂಡು, ಸಹಾಯಕ ಕೃಷಿ ನಿರ್ದೇಶಕ ಕೆ.ಎನ್. ಮಹಾರಡ್ಡಿ, ಕಂದಾಯ ನಿರೀಕ್ಷಕ ಪುನಿತಕುಮಾರ, ಗ್ರಾಮ ಆಡಳಿತ ಅಧಿಕಾರಿ ಶಿವರಾಜ ಸುರಿನ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
