ಸುದ್ದಿ ಕನ್ನಡ ವಾರ್ತೆ
​ಜೋಯಿಡಾ:ತಾಲೂಕಿನ ಕುಂಬಾರವಾಡಾ ಸಮೀಪ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೋರ್ವ ಗಾಯಗೊಂಡಿರುವ ಘಟನೆ ನಡೆದಿದೆ.

​ಅಪಘಾತದಲ್ಲಿ ಬೈಕ್ ಸವಾರ ಶುಭಂ ಜಳಕಟ್ಟಿ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಜಖಂಗೊಂಡಿದೆ.

​ವಿಷಯ ತಿಳಿಯುತ್ತಿದ್ದಂತೆ ಜೋಯಿಡಾ ಪೊಲೀಸ್ ಉಪನಿರೀಕ್ಷಕರಾದ (ಪಿಎಸ್ಐ) ಜಗದೀಶ್ ನಾಯ್ಕ ಅವರು ಸಿಬ್ಬಂದಿಯೊಂದಿಗೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗಾಯಾಳನ್ನು ತಕ್ಷಣ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೋಯಿಡಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.