ಸುದ್ದಿ ಕನ್ನಡ ವಾರ್ತೆ
ಶಿರಸಿ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಂಗಳೂರು ಅಲೆನ್ ಕರಿಯರ್ ಇನ್ಸ್ಟಿಟ್ಯೂಟ್ನಲ್ಲಿ ವ್ಯಾಸಂಗ ಮಾಡಿರುವ ತಾಲೂಕಿನ ಮಳಲಗಾವ್ ಗ್ರಾಮದ ಪ್ರಣವ್ ನಾಯ್ಕ ಅತ್ಯುನ್ನತ ಅಂಕಗಳಿಸುವ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾನೆ.
ಈ ಪ್ರತಿಭಾವಂತ ವಿದ್ಯಾರ್ಥಿ ಶಾಸಕ ಭೀಮಣ್ಣ ಟಿ ನಾಯ್ಕರ ಸಹೋದರ ದಿ.ಭೈರಪ್ಪರವರ ಮೊಮ್ಮಗ ಉದ್ಯಮಿ ಅನಿಲ್ ಹಾಗೂ ಭಾಗ್ಯ ದಂಪತಿಯ ಪುತ್ರ. ಪ್ರಣವ್ 99.7611875 ಪರ್ಸಂಟೈಲ್ ನೊಂದಿಗೆ 622 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ ಸಾಮಾನ್ಯ ವಿಭಾಗದಲ್ಲಿ 2203 ನೇ ರ್ಯಾಂಕ್ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ಜೆಇಇ ಮೇನ್ಸ್ ಅಲ್ಲಿ ಕೂಡ ಈತ 97.7633165 ಪರ್ಸಂಟೈಲ್ ಪಡೆದಿದ್ದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ. ಸಹೋದರನ ಮೊಮ್ಮಗ ಪ್ರಣವ್ ಸಾಧನೆಗೆ ಶಾಸಕ ಭೀಮಣ್ಣ ಟಿ ನಾಯ್ಕ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
