ಸುದ್ದಿ ಕನ್ನಡ ವಾರ್ತೆ
ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಧರ್ಮಪತ್ನಿ ಸೌಮ್ಯತೆ ಮತ್ತು ಕುಟುಂಬ ಮೌಲ್ಯಗಳ ಪ್ರತೀಕವಾಗಿದ್ದ ಶ್ರೀಮತಿ ಚೆನ್ನಮ್ಮ ಅವರ ಅಗಲಿಕೆಯ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಎಂದು ಶಾಸಕ ಆರ್ ವಿ ದೇಶಪಾಂಡೆ ಅವರು ಕಂಬನಿ ಮಿಡಿದಿದ್ದಾರೆ
ಹೆಚ್.ಡಿ.ದೇವೇಗೌಡ ಅವರ ಸುದೀರ್ಘ ಸಾರ್ವಜನಿಕ ಹಾಗೂ ರಾಜಕೀಯ ಜೀವನದ ಪಯಣದಲ್ಲಿ ಸದಾ ಬೆನ್ನೆಲುಬಾಗಿ ನಿಂತು, ಕುಟುಂಬದ ಶಕ್ತಿಯಾಗಿ, ಆದರ್ಶ ಮಾತೃಸ್ವರೂಪಿಯಾಗಿ ಬದುಕಿದ ಶ್ರೀಮತಿ ಚೆನ್ನಮ್ಮ ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲ, ಅನೇಕ ಅಭಿಮಾನಿಗಳಿಗೂ ತುಂಬಲಾರದ ನಷ್ಟವಾಗಿದೆ.
ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಎಲ್ಲ ಸದಸ್ಯರು ಹಾಗೂ ಅಪಾರ ಬಂಧು-ಬಳಗ ಮತ್ತು ಹಿತೈಷಿಗಳಿಗೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.ಎಂದು ಆರ್ ವಿ. ದೇಶಪಾಂಡೆ ಸಂತಾಪ ಸಂದೇಶ ಕಳುಹಿಸಿದ್ದಾರೆ.
