ಸುದ್ದಿ ಕನ್ನಡ ವಾರ್ತೆ
ಹಳಿಯಾಳ: ​ಚೀನಾದಲ್ಲಿ ನಡೆದ ಯು-23 ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ 5,000 ಮೀ. ಹಾಗೂ 10,000 ಮೀ. ಓಟಗಳಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪಗೌಡ ಅವರಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

 

ಗ್ರಾಮ ಪ್ರವೇಶ ವೇಳೆ ಶಿವಾಜಿಗೆ ಪುಷ್ಪವೃಷ್ಟಿ, ಮೆರವಣಿಗೆ ಹಾಗೂ ಸಾಂಪ್ರದಾಯಿಕ ವಾದ್ಯಗಳೊಂದಿಗೆ ಭವ್ಯ ಸ್ವಾಗತ ನೀಡಲಾಯಿತು. ಗ್ರಾಮಸ್ಥರು,ಕ್ರೀಡಾಭಿಮಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಅವರ ಸಾಧನೆ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ.​ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಶಿವಾಜಿಯ ಸಾಧನೆ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆ ಮಾತ್ರವಲ್ಲ, ದೇಶದ ಕೀರ್ತಿಯನ್ನೂ ಹೆಚ್ಚಿಸಿದ್ದು, ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ ಎಂದು ಶ್ಲಾಘಿಸಿದರು.