ಸುದ್ದಿ ಕನ್ನಡ ವಾರ್ತೆ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪೈಕಿ, ಪ್ರತಿ ಜಿಲ್ಲೆಗೆ ಒಂದರಂತೆ ಆಯ್ಕೆ ಮಾಡಲಾಗಿರುವ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಉನ್ನತೀಕರಿಸುವ ಮಹತ್ವದ ಯೋಜನೆಯಡಿ,ನನ್ನ ಮತಕ್ಷೇತ್ರದ ಜೋಯಿಡಾ ತಾಲೂಕಿನ ರಾಮನಗರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯೂ ಪದವಿ ಪೂರ್ವ ಕಾಲೇಜಾಗಿ ಉನ್ನತೀಕರಣ ಗೊಳ್ಳುತ್ತಿರುವುದು ಹೆಮ್ಮೆಯ ಹಾಗೂ ಸಂತಸದ ಸಂಗತಿಯಾಗಿದೆ.ಎಂದು ಶಾಸಕರಾದ ಆರ್ ವಿ ದೇಶಪಾಂಡೆ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ನಂತರವೂ ಅದೇ ವಸತಿ ವ್ಯವಸ್ಥೆಯಲ್ಲಿ ಪದವಿ ಪೂರ್ವ ಶಿಕ್ಷಣ ಮುಂದುವರಿಸಲು ಅವಕಾಶ ದೊರೆಯಲಿದೆ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸುವ ಪ್ರಮಾಣ ಕಡಿಮೆಯಾಗುವುದರ ಜೊತೆಗೆ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣದ ಅವಕಾಶಗಳು ಮತ್ತಷ್ಟು ಸುಗಮವಾಗಲಿವೆ.
ಶಿಕ್ಷಣವೇ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯ ಶಕ್ತಿಯುತ ಸಾಧನವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಒದಗಿಸುವ ಈ ಮಹತ್ವದ ಹೆಜ್ಜೆ ಸರ್ವರಿಗೂ ಶಿಕ್ಷಣ ಎಂಬ ಆಶಯವನ್ನು ಮತ್ತಷ್ಟು ಬಲಪಡಿಸಲಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸುತ್ತೇನೆ.ಎಂದು ಮಾನ್ಯ ಶಾಸಕ ರಾದ
ಆರ್ ವಿ ದೇಶಪಾಂಡೆ ಅವರು ತಿಳಿಸಿರುತ್ತಾರೆ.
