ಸುದ್ದಿ ಕನ್ನಡ ವಾರ್ತೆ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಭತ್ತ (ಮಳೆಯಾಶ್ರಿತ) ಬೆಳೆಗೆ ತಾಲ್ಲೂಕಿನ ಗ್ರಾ.ಪಂ ಮಟ್ಟದಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು ಅರ್ಹ ರೈತರು ನಿಗದಿತ ಅವಧಿಯೊಳಗೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜೋಯಿಡಾ ಕೃಷಿ ಇಲಾಖೆ ಮನವಿ ಮಾಡಿದೆ.

ಭತ್ತ (ಮಳೆಯಾಶ್ರಿತ) ಬೆಳೆಗೆ ಪ್ರತಿ ಎಕರೆಗೆ ರೂ. 30595 ವಿಮಾ ಮೊತ್ತ ನಿಗದಿಯಾಗಿದ್ದು, ರೈತರು ರೂ. 612 ಪ್ರೀಮಿಯಂ ಮೊತ್ತ ಪಾವತಿಸಬೇಕಾಗಿದೆ. ಈ ಯೋಜನೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಅನ್ವಯವಾಗಲಿದ್ದು ಆಗಸ್ಟ್ 14 (14-08-2026) ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ನೋಂದಣಿಗೆ ಫೂಟ್ಸ್ ಐಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹಾಗು ಜಮೀನಿನ ಪಹಣಿ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರೈತರು ತಮ್ಮ ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಸಂಘ, ಸಾಮಾನ್ಯ ಸೇವಾ ಕೆಂದ್ರ (CSC) ಹಾಗು ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಇಫ್ಟ್ ಟೊಕಿಯೊ ಜನರಲ್ ಇನ್ಸೂರೆನ್ಸ್ ಕಂಪನಿಯ ಸಹಾಯವಾಣಿ ಸಂಖ್ಯೆ 1800-103-5490, ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಜೋಯಿಡಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸ ಬಹುದೆಂದು ಸಹಾಯಕ ನಿರ್ದೇಶಕರು ಕೃಷಿ ಇಲಾಖೆ ಜೊಯಿಡಾ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.