ಸುದ್ದಿ ಕನ್ನಡ ವಾರ್ತೆ
​ಕುಮಟಾ: ರಾಷ್ಟ್ರೀಯ ಹೆದ್ದಾರಿ 66ರ ಮಾನೇರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಪಕ್ಕದ ಹೊಳೆಗೆ ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ.

​ಅಂಕೋಲಾ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ, ಮಾನೇರು ಬಳಿ ಬರುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಉರುಳಿದೆ.

ಅಪಘಾತದ ತೀವ್ರತೆ ಹೆಚ್ಚಿದ್ದರೂ ಲಾರಿಯ ಚಾಲಕ ಹಾಗೂ ಕ್ಲೀನರ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿರುವುದು ಸಮಾಧಾನದ ಸಂಗತಿಯಾಗಿದೆ.
​ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಳೆಗೆ ಬಿದ್ದಿರುವ ಲಾರಿಯನ್ನು ಕ್ರೇನ್ ಸಹಾಯದಿಂದ ಮೇಲಕ್ಕೆ ಎತ್ತುವ ಕಾರ್ಯ ನಡೆಯಿತು. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.