ಸುದ್ದಿ ಕನ್ನಡ ವಾರ್ತೆ
ಕಾರವಾರ: ನಗರದ ಬಸ್ ನಿಲ್ದಾಣದ ಸಮೀಪ ಬುಧವಾರ ಬೆಳಿಗ್ಗೆ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ.
ಕಾರಿನ ಚಾಲಕ ಯು-ಟರ್ನ್ ಮಾಡಲು ಬ್ರೇಕ್ ಹಾಕಿದ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಹಿಂಭಾಗದ ಗಾಜು ಪುಡಿಪುಡಿಯಾಗಿದ್ದು, ವಾಹನಕ್ಕೆ ಹಾನಿಯಾಗಿದೆ.
ಅಪಘಾತದ ಮಾಹಿತಿ ತಿಳಿದ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
