Banner Ad

ಸುದ್ದಿ ಕನ್ನಡ ವಾರ್ತೆ
​ಮುಂಡಗೋಡ:ತಾಲೂಕಿನ ಮೈಗಳಿ-ಶಿಡ್ಲಗುಂಡಿ ನಡುವಿನ ಸೇತುವೆ ಬಳಿ ಸಾರಿಗೆ ಸಂಸ್ಥೆ ಬಸ್‌ ಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕರ ಸಹಿತ ಹಲವು ಪ್ರಯಾಣಿಕರು ತೀವ್ರ ಗಾಯಗೊಂಡ ಘಟನೆ ನಡೆದಿದೆ.

​ಬೆಂಗಳೂರಿನಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಬಸ್‌ ಹಾಗೂ ಯಲ್ಲಾಪುರದಿಂದ ಮುಂಡಗೋಡಿಗೆ ಬರುತ್ತಿದ್ದ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿ ರಭಸಕ್ಕೆ ಚಾಲಕರಿಬ್ಬರೂ ಬಸ್‌ ಒಳಗೆ ಸಿಲುಕಿಕೊಂಡಿದ್ದರು.

Banner Ad

ಬಳಿಕ ಜೆಸಿಬಿ ಮೂಲಕ ತೆರವುಗೊಳಿಸಿ ಅವರನ್ನು ಹೊರ ತೆಗೆಯಲಾಗಿದೆ. ಗಾಯಾಳುಗಳನ್ನು ಮುಂಡಗೋಡ ಹಾಗೂ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಚಿಂತಾಜನಕ ಸ್ಥಿತಿಯಲ್ಲಿದ್ದ ಚಾಲಕರು ಹಾಗೂ ಕೆಲ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ ಹಾಗೂ ಮುಂತಾದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Banner Ad