Banner Ad

ಸುದ್ದಿ ಕನ್ನಡ ವಾರ್ತೆ
​ಕಾರವಾರ: ತಾಲೂಕಿನ ಮಲ್ಲಾಪುರ ಸಮೀಪದ ಕುರ್ನಿಪೇಟೆಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಸೆರೆಹಿಡಿದ ಘಟನೆ ಭಾನುವಾರ ಸಂಜೆ ನಡೆದಿದೆ.

​ಕುರ್ನಿಪೇಟೆಯ ಎಲ್&ಟಿ ಕಾಂಪೌಂಡ್ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಸಾರ್ವಜನಿಕ ಜಾಗದಲ್ಲಿ ಸರ್ಪ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

Banner Ad

​ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಬಿಲಾಲ್ ಶೇಖ್ ಹಾಗೂ ರಾಯಪ್ಪ ಅವರು ಕಾರ್ಯಾಚರಣೆ ನಡೆಸಿ, ಕಾಂಪೌಂಡ್ ಮೇಲೆ ಕುಳಿತಿದ್ದ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದರು. ಕಾಳಿಂಗ ಸರ್ಪವನ್ನು ಹಿಡಿಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಬಳಿಕ ಸೆರೆಹಿಡಿದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು.

Banner Ad