Banner Ad

ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ:ತಾಲೂಕಿನ ತೋಟದ ಕಲ್ಲಳ್ಳಿ ಕ್ರಾಸ್ ಬಳಿ ಬೊಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ.

Banner Ad

 

ಜಡ್ಡಿಗದ್ದೆಯ ಕೃಷ್ಣ ಸಿದ್ದಿ (64) ಮೃತ ವ್ಯಕ್ತಿ. ಈತನ ಪತ್ನಿ ಸುನಂದಾ ಕೃಷ್ಣ ಸಿದ್ದಿ ಹಾಗೂ 4 ವರ್ಷದ ಮಗು ಸಮನ್ವಿ ಸಿದ್ದಿ ಗಾಯಗೊಂಡವರು. ಉಮ್ಮಚಗಿ ಗ್ರಾಮದ ಕಡೆಯಿಂದ ಭರತನಹಳ್ಳಿ ಕಡೆಗೆ ತೆರಳುತ್ತಿದ್ದ ಬೊಲೆರೋ ಗೂಡ್ಸ್ ವಾಹನ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.

 

ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಸಿದ್ದಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಗಾಯಗೊಂಡ ಸುನಂದಾ ಹಾಗೂ ಸಮನ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Banner Ad