Banner Ad

ಸುದ್ದಿ ಕನ್ನಡ ವಾರ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ,ಧೀಮಂತ ರಾಜಕಾರಣಿ ಹಾಗೂ ಜನಪರ ಆಡಳಿತದ ಹರಿಕಾರರಾದ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ನಾಮಕರಣ ಮಾಡಿರುವುದು ಅವರ ಸ್ಮರಣೆಯನ್ನು ಜಿಲ್ಲೆಯ ಜನಮಾನಸದಲ್ಲಿ ಚಿರಸ್ಥಾಯಿಗೊಳಿಸುವ ಅತ್ಯಂತ ಸಾರ್ಥಕ ಹಾಗೂ ಅನುಕರಣೀಯ ಹೆಜ್ಜೆಯಾಗಿದೆ.ಎಂದು ಆಡಳಿತ ಸುಧಾರಣಾ ಸಮಿತಿ ಅಧ್ಯಕ್ಷರು ಶಾಸಕರು ಆದ ಆರ್ ವಿ ದೇಶಪಾಂಡೆ ಹೇಳಿದ್ದಾರೆ ಈ ಬಗ್ಗೆ ಪ್ರಕಟಣೆ ನೀಡಿರುವ ದೇಶಪಾಂಡೆ ಅವರು ಗ್ರಾಮೀಣ ಆಡಳಿತ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಗೆ ರಾಮಕೃಷ್ಣ ಹೆಗಡೆಯವರು ನೀಡಿದ ಅಪೂರ್ವ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ‘ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯತ್ ಪ್ರಶಸ್ತಿ’ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತಸದ ಸಂಗತಿ.ಮೌಲ್ಯಾಧಾರಿತ ರಾಜಕಾರಣಕ್ಕೆ ಹೊಸ ಅರ್ಥ ನೀಡಿದ, ವಿಕೇಂದ್ರೀಕೃತ ಆಡಳಿತಕ್ಕೆ ಬಲ ತುಂಬಿದ ಹಾಗೂ ಗ್ರಾಮೀಣಾಭಿವೃದ್ಧಿಗೆ ದೂರದೃಷ್ಟಿಯ ದಿಕ್ಕು ತೋರಿದ ರಾಮಕೃಷ್ಣ ಹೆಗಡೆಯವರ ಆಡಳಿತಾತ್ಮಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ.ಅವರ ಆದರ್ಶಗಳು ಮತ್ತು ಜನಪರ ಆಡಳಿತದ ಮೌಲ್ಯಗಳು ಮುಂದಿನ ಪೀಳಿಗೆಗಳಿಗೂ ದಾರಿದೀಪವಾಗಲಿ ಎಂಬುದು ನಮ್ಮ ಆಶಯ.ಎಂದಿದ್ದಾರೆ.

Banner Ad

ರಾಮಕೃಷ್ಣ ಹೆಗಡೆಯವರ ಸ್ಮರಣೆಯನ್ನು ಗೌರವಿಸಿ, ಅವರ ಜನಪರ ಚಿಂತನೆಗಳನ್ನು ಶಾಶ್ವತಗೊಳಿಸುವ ಈ ಮಹತ್ವದ ನಿರ್ಧಾರ ಕೈಗೊಂಡ ಮಾನ್ಯ ಮುಖ್ಯಮಂತ್ರಿಯವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆಎಂದು ಶಾಸಕ ಆರ್ ವಿ ದೇಶಪಾಂಡೆ ಅವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Banner Ad