ಸುದ್ದಿ ಕನ್ನಡ ವಾರ್ತೆ
ಶಿರಸಿ/ರಾಯಚೂರು:
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ರೈತ ಮೋರ್ಚಾ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.
“ಬಳ್ಳಾರಿ ಚಲೋ” ಬೃಹತ್ ಪಾದಯಾತ್ರೆ ಅಂಗವಾಗಿ ಗುರುವಾರ ರಾಯಚೂರು ಜಿಲ್ಲೆಯ ಮಸ್ಕಿ ಗುಡದೂರು” ಗ್ರಾಮ ದಿಂದ ಸಿಂಧನೂರು ವರೆಗಿನ ಪಾದಯಾತ್ರೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರ್ನಾಟಕದಲ್ಲಿ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತೇಸಬೇಕಿದೆ. ಮುಖ್ಯ ಮಂತ್ರಿಯವರಿಗೆ ರಿಯಲ್ ಎಸ್ಟೇಟ್ ಕ್ಷೇತ್ರದ ಬಗ್ಗೆ ಇರುವ ಆಸಕ್ತಿ ರಾಜ್ಯದ ರೈತರ ಬಗ್ಗೆ,ಮಹಿಳೆಯರ ಬಗ್ಗೆ, ಯುವಕರ ಉದ್ಯೋಗದ ಬಗ್ಗೆ ಇಲ್ಲ. ಬರೀ ಭ್ರಷ್ಟಾಚಾರವೇ ಸರ್ಕಾರದಲ್ಲಿ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಯೋಜನೆಎಂಬ ಹೆಸರಿನಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯಾವ ಅಭಿವೃದ್ಧಿಯ ಕೆಲಸವನ್ನೂ ಮಾಡದೇ ಲೂಟಿ ಹೊಡೆಯುವ ಕೆಲಸ ಮಾಡುತ್ತಿದೆ.
ಮೂಡಾ ಹಗರಣ, 170 ಕೋಟಿಯ ವಾಲ್ಮೀಕಿ ಹಣದ ಹಗರಣ, ಗೃಹಲಕ್ಷ್ಮಿ ಹಣದ ಲೂಟಿ ಸೇರಿದಂತೆ ಹಲವು ಹಗರಣಗಳು ನಡೆದಿದೆ. ರೈತರ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು,2028 ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದರು. ಸರ್ಕಾರದ ಬೇಜವಾಬ್ದಾರಿ ಹೇಳಿಕೆಗಳು , ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ನಮ್ಮ ಹೋರಾಟ ಈಗಾಗಲೇ ಮುಖ್ಯಮಂತ್ರಿಗಳಿಗೆ ಭಯ ಹುಟ್ಟಿಸಿದೆ.ಎರಡನೇ ಹಂತದ ಬರ ಪರಿಹಾರವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ನಮ್ಮ ಪಾದಯಾತ್ರೆಗೆ ಭರ್ಜರಿ ಜನ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ದಲಿತರನ್ನು ದುರ್ಬಳಕೆ ಮಾಡಿಕೊಂಡು ಓಟ್ ಬ್ಯಾಂಕ್ ಆಗಿ ಮಾಡಿಕೊಂಡು ಅವರಿಗೆ ಅನ್ಯಾಯ ಮಾಡುತ್ತಿದೆ. ಇಂತಹ ಹಲವು ಜನವಿರೋಧಿ ನೀತಿಗಳನ್ನು ವಿರೋಧಿಸಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರಮುಖರಾದ
,ಶಿವಕುಮಾರ್ ನಾಯ್ಕ್ ಕೊಂಡ್ಲಿ , ಬಸಣ್ಣ ಕುರುಬ ಕಟ್ಟಿ, ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಿಂದ ನೂರಾರು ರೈತ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.
