ಸುದ್ದಿ ಕನ್ನಡ ವಾರ್ತೆ
​ಜೋಯಿಡಾ: ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಜೋಯಿಡಾದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

​ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅದೇ ರೀತಿ ಥ್ರೋಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

​ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು ಹಾಗೂ ಸಹ ಶಿಕ್ಷಕರು ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.